ADVERTISEMENT

ಬಿಸಿಗಾಳಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ಪಿಟಿಐ
Published 22 ಮೇ 2025, 13:53 IST
Last Updated 22 ಮೇ 2025, 13:53 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಬಿಸಿಗಾಳಿಯ ಪರಿಸ್ಥಿತಿ‌ ನಿಭಾಯಿಸುವ ಕ್ರಿಯಾಯೋಜನೆಗೆ ಅಗತ್ಯವಿರುವ ರಾಷ್ಟ್ರೀಯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸೂಚಿಸಬೇಕು ಎಂಬ ಅರ್ಜಿಯ ಕುರಿತು ಕೇಂದ್ರದ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಕೇಳಿದೆ.

ಕಳೆದ ವರ್ಷ ಬಿಸಿಗಾಳಿಯ ಕಾರಣದಿಂದಾಗಿ 700ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್‌ ಮಸೀಹ್ ಅವರು ಇರುವ ವಿಭಾಗೀಯ ‍ಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೆ ಆದೇಶಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.