ADVERTISEMENT

ಸುಳ್ಳು ಸುದ್ದಿ ಕುರಿತ ಅರ್ಜಿ: ಕೇಂದ್ರ, ಟ್ವಿಟರ್‌ಗೆ ಸುಪ್ರೀಂ ಕೋರ್ಟ್ ನೊಟೀಸ್

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 7:07 IST
Last Updated 12 ಫೆಬ್ರುವರಿ 2021, 7:07 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸುಳ್ಳು ಸುದ್ದಿ ಹಾಗೂ ನಕಲಿ ಖಾತೆಗಳ ಮೂಲಕ ಪ್ರಚೋದನಾತ್ಮಕ ವಿಷಯಗಳ ಹರಡುವಿಕೆ ತಡೆಗೆ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಟ್ವಿಟರ್‌ಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ.

ಸುಳ್ಳು ಸುದ್ದಿ ಹರಡುವಿಕೆ ತಡೆಯುವ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.

ಟಿಕ್‌ಟಾಕ್ ಮತ್ತು ರೆಡ್ಡಿಟ್‌ಗೆ ಹೋಲಿಸಿದರೆ ಸಾಮಾಜಿಕ ತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸುವ ವಿಚಾರದಲ್ಲಿ ಫೇಸ್‌ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ ತುಂಬಾ ಹಿಂದುಳಿದಿವೆ ಎಂದು ಇತ್ತೀಚೆಗೆ ವರದಿಯೊಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.