ADVERTISEMENT

ರಾಜಸ್ಥಾನ ಬಿಎಸ್‌ಪಿ ಶಾಸಕರ ಪಕ್ಷಾಂತರ: ಸ್ಪೀಕರ್‌, ಶಾಸಕರಿಗೆ ಸುಪ್ರೀಂ ನೋಟಿಸ್

ಪಿಟಿಐ
Published 7 ಜನವರಿ 2021, 10:20 IST
Last Updated 7 ಜನವರಿ 2021, 10:20 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ರಾಜಸ್ಥಾನದಲ್ಲಿ ಬಿಎಸ್‌ಪಿಯ ಆರು ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆಸುಪ್ರಿಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿ ಎಸ್‌.ಅಬ್ದುಲ್ ನಜೀರ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, ವಿಧಾನಸಭೆ ಕಾರ್ಯದರ್ಶಿ ಮತ್ತು ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ ಎಲ್ಲ ಆರು ಶಾಸಕರಿಗೂ ನೋಟಿಸ್ ನೀಡಿತು.

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಈ ಕುರಿತು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಬಿಎಸ್‌ಪಿ ಶಾಸಕರ ಅನರ್ಹತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಸ್ಪೀಕರ್ ಅವರಿಗೆ ಆದೇಶಿಸಿದ್ದ ರಾಜಸ್ಥಾನ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.

ADVERTISEMENT

ಆರು ಶಾಸಕರ ಪಕ್ಷಾಂತರದಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ವೃದ್ಧಿಯಾಗಿದ್ದು, ಅಶೋಕ್‌ ಗೆಹ್ಲೋಟ್ ನೇತೃತ್ವದ ಸರ್ಕಾರದ ಸ್ಥಾನವನ್ನು ಇನ್ನಷ್ಟು ಬಲಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.