ADVERTISEMENT

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನಿವೃತ್ತಿ

ಪಿಟಿಐ
Published 24 ಸೆಪ್ಟೆಂಬರ್ 2022, 5:07 IST
Last Updated 24 ಸೆಪ್ಟೆಂಬರ್ 2022, 5:07 IST
ಇಂದಿರಾ ಬ್ಯಾನರ್ಜಿ
ಇಂದಿರಾ ಬ್ಯಾನರ್ಜಿ   

ನವದೆಹಲಿ: ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ಶುಕ್ರವಾರ ನಿವೃತ್ತಿ ಹೊಂದಿದರು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಈ ಹುದ್ದೆ ನಿರ್ವಹಿಸಿದ ಅವರು ಸುಪ್ರೀಂಕೋರ್ಟ್‌ನ ಐದನೇ ಹಿರಿಯ ನ್ಯಾಯಮೂರ್ತಿಯಾಗಿದ್ದರು.

ಅವರ ನಿವೃತ್ತಿಯಿಂದಾಗಿ ಸುಪ್ರೀಂಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೆ ಇಳಿದಿದೆ. ಪ್ರಸ್ತುತ ಹಿಮಾ ಕೊಹ್ಲಿ, ಬಿ.ವಿ. ನಾಗರತ್ನ ಮತ್ತು ಬೇಲಾ ಎಂ. ತ್ರಿವೇದಿ ಅವರು ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬ್ಯಾನರ್ಜಿ ಅವರು ಸುಪ್ರೀಂಕೋರ್ಟ್‌ನ 8ನೇ ಮಹಿಳಾ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT