ADVERTISEMENT

ನರೇಗಾ ಅನುದಾನಕ್ಕೆ ಆಗ್ರಹ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಪಿ.ಎಸ್‌.ನರಸಿಂಹ

ಪಿಟಿಐ
Published 9 ಫೆಬ್ರುವರಿ 2024, 13:14 IST
Last Updated 9 ಫೆಬ್ರುವರಿ 2024, 13:14 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ಮನರೇಗಾ) ರಾಜ್ಯಗಳು ಅನುಷ್ಠಾನಗೊಳಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಅವರು ಶುಕ್ರವಾರ ಹಿಂದೆ ಸರಿದಿದ್ದಾರೆ.

ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಅರವಿಂದ ಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಬೇಕಿತ್ತು.

ADVERTISEMENT

‘ಪ್ರಕರಣದ ವಿಚಾರಣೆಗೆ ಹೊಸ ನ್ಯಾಯಪೀಠ ರಚನೆ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನು ಕೋರಲಾಗುತ್ತದೆ’ ಎಂದು ಪಿ.ಎಸ್‌.ನರಸಿಂಹ ಹೇಳಿದರು.

ಹಲವು ರಾಜ್ಯಗಳಲ್ಲಿ ಮನರೇಗಾ ಯೋಜನೆಗೆ ಮೀಸಲಿಟ್ಟ ಅನುದಾನ ಸಂಪೂರ್ಣ ಖರ್ಚಾಗಿದ್ದು, 2021ರ ನವೆಂಬರ್‌ 26ರವರೆಗಿನ ಮಾಹಿತಿಯಂತೆ ರಾಜ್ಯ ಸರ್ಕಾರಗಳಿಗೆ ₹9,682 ಕೋಟಿ ಕೊರತೆಯಾಗಿದೆ. ಹೀಗಾಗಿ ಈ ಯೋಜನೆ ಅಡಿ ಕೆಲಸ ಮಾಡಿರುವ ದೇಶದ ಕೋಟ್ಯಂತರ ಕಾರ್ಮಿಕರಿಗೆ ಕೂಲಿ ನೀಡಲು ಸಾಧ್ಯವಾಗುತ್ತಿಲ್ಲ. ರಾಜ್ಯಗಳಿಗೆ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ‘ಸ್ವರಾಜ್‌ ಅಭಿಯಾನ’ ತನ್ನ ಅರ್ಜಿಯಲ್ಲಿ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.