ADVERTISEMENT

ಸುಶಾಂತ್‌ ಆತ್ಮಹತ್ಯೆ: ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ವಜಾ

ಪಿಟಿಐ
Published 30 ಜುಲೈ 2020, 12:07 IST
Last Updated 30 ಜುಲೈ 2020, 12:07 IST
ಸುಶಾಂತ್‌ ಸಿಂಗ್‌
ಸುಶಾಂತ್‌ ಸಿಂಗ್‌   

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಸುಪ್ರೀಂಕೋರ್ಟ್‌ ಗುರುವಾರವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು.ಅಲ್ಕ ಪ್ರಿಯಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ದಾವೆಗಳಿದ್ದರೆ ಮುಂಬೈ ಹೈಕೋರ್ಟ್‌ ಮೊರೆ ಹೋಗುವಂತೆ ನ್ಯಾಯಪೀಠ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.