ADVERTISEMENT

ವಿವಿಪ್ಯಾಟ್ ತಾಳೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 7 ಏಪ್ರಿಲ್ 2025, 12:18 IST
Last Updated 7 ಏಪ್ರಿಲ್ 2025, 12:18 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಮತ ಎಣಿಕೆ ಸಂದರ್ಭದಲ್ಲಿ ವಿವಿ–ಪ್ಯಾಟ್‌ (ಮತದಾನ ದೃಢೀಕರಣ ರಸೀದಿ ಯಂತ್ರ) ರಸೀದಿಗಳನ್ನು ನೂರಕ್ಕೆ ನೂರರಷ್ಟು ತಾಳೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎನ್ನುವ ಕೋರಿಕೆ ಇದ್ದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಹಂಸರಾಜ್ ಜೈನ್‌ ಎನ್ನುವವರು ಈ ಅರ್ಜಿ ಸಲ್ಲಿಸಿದ್ದರು. ಇದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇದ್ದ ತ್ರಿಸದಸ್ಯ ಪೀಠದ ಎದುರು ಬಂದಿತ್ತು.

ADVERTISEMENT

ಜೈನ್‌ ಅವರು ಇದೇ ಕೋರಿಕೆಯೊಂದಿಗೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.