ADVERTISEMENT

ನಿರ್ದಿಷ್ಟ ಸಮಯದೊಳಗೆ ಅರ್ಜಿಗಳ ವಿಲೇವಾರಿ ಕೋರಿದ್ದ ಮನವಿ ತಿರಸ್ಕರಿಸಿದ ಕೋರ್ಟ್‌

ಪಿಟಿಐ
Published 18 ಅಕ್ಟೋಬರ್ 2024, 13:23 IST
Last Updated 18 ಅಕ್ಟೋಬರ್ 2024, 13:23 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ದೇಶದ ಎಲ್ಲ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ನಿರ್ದಿಷ್ಟ ಸಮಯದ ಒಳಗಾಗಿ ವಿಲೇವಾರಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯೊಂದನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್‌, ‘ಇದು ಅಮೆರಿಕದ ಸುಪ್ರೀಂ ಕೋರ್ಟ್‌ ಅಲ್ಲ’ ಎಂದು ಶುಕ್ರವಾರ ಹೇಳಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿತು.

ADVERTISEMENT

ಸುಪ್ರೀಂ ಕೋರ್ಟ್‌ ಸೇರಿದಂತೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳನ್ನು 12 ರಿಂದ 36 ತಿಂಗಳ ಒಳಗೆ ವಿಲೇವಾರಿ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಇತರ ದೇಶಗಳಲ್ಲಿ ನ್ಯಾಯಾಲಯಗಳು ಪ್ರಕರಣಗಳ ವಿಲೇವಾರಿ ಮಾಡುವುದಕ್ಕೆ ನಿರ್ದಿಷ್ಟ ಸಮಯ ನಿಗದಿ ಮಾಡಲಾಗಿದೆ ಎಂಬ ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇಂತಹ ಪ್ರಕ್ರಿಯೆ ಅಪೇಕ್ಷಣೀಯವಾದರೂ, ಸಾಧಿಸಲಾಗದ್ದು’ ಎಂದು ಹೇಳಿದೆ.

‘ಇಂತಹ ಕಾರ್ಯಕ್ಕೆ, ಮೂಲಸೌಕರ್ಯಗಳ ಹೆಚ್ಚಳ, ಅಗತ್ಯ ಸಂಖ್ಯೆಯ ನ್ಯಾಯಾಧೀಶರ ನೇಮಕ ಸೇರಿದಂತೆ ಹಲವು ಸಾಧನಗಳ ಅಗತ್ಯವಿದೆ’ ಎಂದು ಸಿಜೆಐ ಚಂದ್ರಚೂಡ್‌ ಹೇಳಿದರು.

‘ಅಮೆರಿಕದ ಸುಪ್ರೀಂ ಕೋರ್ಟ್‌ ಅಥವಾ ಇತರ ಕೆಲ ದೇಶಗಳ ನ್ಯಾಯಾಲಯಗಳಲ್ಲಿ ವರ್ಷಕ್ಕೆ ಎಷ್ಟು ಪ್ರಕರಣಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂಬ ಅರಿವು ನಿಮಗಿದೆಯೇ’ ಎಂದು ಅರ್ಜಿದಾರರನ್ನು ಎಂದು ಪ್ರಶ್ನಿಸಿದರು.

‘ಸುಪ್ರೀಂ ಕೋರ್ಟ್‌ನಲ್ಲಿ ಒಂದು ದಿನದಲ್ಲಿ ವಿಲೇವಾರಿಯಾಗುವ ಪ್ರಕರಣಗಳ ಸಂಖ್ಯೆಯು, ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳ ಕೋರ್ಟ್‌ಗಳು ಒಂದು ವರ್ಷದಲ್ಲಿ ವಿಲೇವಾರಿ ಮಾಡುವ ಅರ್ಜಿಗಳಿಗಿಂತ ಹೆಚ್ಚು ಇರುತ್ತದೆ’ ಎಂದೂ ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.