ADVERTISEMENT

ಸಿಬಿಐಗೆ ‘ಸುಪ್ರೀಂ’ ನೋಟಿಸ್‌

ಮುಲಾಯಂ ಸಿಂಗ್‌ ಯಾದವ್‌ ವಿರುದ್ಧ ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣ

ಪಿಟಿಐ
Published 25 ಮಾರ್ಚ್ 2019, 16:59 IST
Last Updated 25 ಮಾರ್ಚ್ 2019, 16:59 IST
ಮುಲಾಯಂ
ಮುಲಾಯಂ   

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್‌ ಯಾದವ್‌ ಮತ್ತು ಅವರ ಪುತ್ರರಾದ ಅಖಿಲೇಶ್‌ ಹಾಗೂ ಪ್ರತೀಕ್‌ ಅವರ ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಸೋಮವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್‌ ಗುಪ್ತಾ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಪ್ರಕರಣದ ತನಿಖೆಯ ಸ್ಥಿತಿಗತಿ ಬಗ್ಗೆ ಎರಡು ವಾರದೊಳಗೆ ವರದಿ ನೀಡಬೇಕು ಎಂದು ಸಿಬಿಐಗೆ ಸೂಚಿಸಿತು.

ಮುಲಾಯಂ ಸಿಂಗ್‌ ಯಾದವ್‌ ಹಾಗೂ ಅವರ ಪುತ್ರರು ಮತ್ತು ಅಖಿಲೇಶ್‌ ಪತ್ನಿ ಡಿಂಪಲ್‌ ವಿರುದ್ಧ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು ಎಂದುಕಾಂಗ್ರೆಸ್‌ ಮುಖಂಡ ವಿಶ್ವನಾಥ್‌ ಚತುರ್ವೇದಿ 2005ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.