ADVERTISEMENT

ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅವಕಾಶ: ಕೇಂದ್ರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 14:01 IST
Last Updated 15 ಮಾರ್ಚ್ 2021, 14:01 IST
.
.   

ನವದೆಹಲಿ: ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿರುವ ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೊರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ಪೀಠವು ಈ ನಿರ್ದೇಶನ ನೀಡಿದೆ.

ಆಯುಷ್‌ ಸಚಿವಾಲಯ, ಭಾರತೀಯ ಔಷಧಗಳ ಕೇಂದ್ರೀಯ ಮಂಡಳಿ (ಸಿಸಿಐಎಂ) ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೂ ಪೀಠವು ನೋಟಿಸ್‌ ಜಾರಿಗೊಳಿಸಲಾಗಿದೆ.

ADVERTISEMENT

ಹಾನಿಕಾರಕವಲ್ಲದ ಗಡ್ಡೆ ತೆಗೆಯುವುದು, ಗ್ಯಾಂಗ್ರಿನ್‌ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಸ್ನಾತಕೋತ್ತರ ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಅನುಮತಿ ನೀಡಿತ್ತು. ಈ ಸಂಬಂಧ ಸಿಸಿಐಎಂ ಅಧಿಸೂಚನೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಐಎಂಎ ಆಕ್ಷೇಪ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.