ADVERTISEMENT

ಚುನಾವಣಾ ಅಭ್ಯರ್ಥಿಗಳಿಗೆ ಮತದಾರರ ಪಟ್ಟಿ: ಪರ್ಯಾಯ ಕೋರಿ ಪಿಐಎಲ್‌

ಪಿಟಿಐ
Published 25 ಅಕ್ಟೋಬರ್ 2022, 13:35 IST
Last Updated 25 ಅಕ್ಟೋಬರ್ 2022, 13:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಮತದಾರರ ಪಟ್ಟಿಯ ಎರಡು ಪ್ರತಿ ನಿಡಬೇಕು ಎಂಬ ನಿಯಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರಕ್ಕೆ ನೋಟಿಸ್ ಜಾರಿಮಾಡಿದೆ.

ವೆಚ್ಚ ತಪ್ಪಿಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಕಾಗದ ಉಳಿಸಲು ಈ ಕ್ರಮಕ್ಕೆ ಪರ್ಯಾಯ ಮಾರ್ಗ ಅನುಸರಿಸಬೇಕು ಎಂದು ಕೋರಿ ಇಬ್ಬರು ವಕೀಲರು ಪಿಐಎಲ್ ಸಲ್ಲಿಸಿದ್ದರು. ‘ಮತದಾರರ ನೋಂದಣಿ ನಿಯಮ 1960’ದ 11 (ಸಿ) ಮತ್ತು 22 (ಸಿ) ಅನ್ನು ಪ್ರಶ್ನಿಸಿದ್ದರು.

ಪ್ರತಿ ಅಭ್ಯರ್ಥಿಗೆ ಎರಡು ಪ್ರತಿ ಮತದಾರರ ಪಟ್ಟಿಯನ್ನು ಉಚಿತವಾಗಿ ನೀಡಬೇಕು ಎಂಬ ನಿಯಮದಿಂದ ದೇಶದ ಮೇಲೆ ಸುಮಾರು ₹ 47.84 ಕೋಟಿ ಹೊರೆ ಆಗುತ್ತಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ADVERTISEMENT

ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್‌ ಮತ್ತು ನ್ಯಾಯಮೂರ್ತಿ ಬಿ.ಎಂ.ತ್ರಿವೇದಿ ಅವರಿದ್ದ ಪೀಠವು ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಮುಖ್ಯ ಚುನಾವಣಾ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.