ADVERTISEMENT

ಮಾರ್ಗದರ್ಶಿ ಸೂತ್ರ ರಚನೆ: ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್‌

ಕೋರ್ಟ್‌ ಮೊರೆಗೂ ಮುನ್ನ ಸಂಧಾನ ಕಡ್ಡಾಯಗೊಳಿಸಲು ಅರ್ಜಿ

ಪಿಟಿಐ
Published 22 ಅಕ್ಟೋಬರ್ 2020, 11:17 IST
Last Updated 22 ಅಕ್ಟೋಬರ್ 2020, 11:17 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ನ್ಯಾಯ ಕೋರಿ ಜನರು ಕೋರ್ಟ್‌ ಮೆಟ್ಟಿಲು ಏರುವುದಕ್ಕೂ ಮೊದಲು, ರಾಜಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಬೇಕು. ಈ ಸಂಬಂಧ ಮಾರ್ಗದರ್ಶಿ ಸೂತ್ರಗಳನ್ನು (ಎಸ್‌ಒಪಿ) ರಚಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಗುರುವಾರ ನೋಟಿಸ್‌ ನೀಡಿದೆ.

ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಿಲೇವಾರಿಯಾಗದೇ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನ್ಯಾಯಾಲಯಗಳ ಮೇಲಿನ ಈ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಮಾರ್ಗದರ್ಶಿ ಸೂತ್ರಗಳನ್ನು ರಚಿಸಬಹುದೇ ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್‌ ಅವರಿರುವ ನ್ಯಾಯಪೀಠವು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್‌ ನೀಡಿದ್ದು, ನಾಲ್ಕು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ADVERTISEMENT

ಯೂಥ್‌ ಬಾರ್‌ ಅಸೋಸಿಯೇಶನ್‌ ಆಫ್‌ ಇಂಡಿಯಾದ ಪದಾಧಿಕಾರಿಗಳು, ವಕೀಲ ಸನ್‌ಪ್ರೀತ್ ಸಿಂಗ್‌ ಅಜ್ಮನಿ ಎಂಬುವವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಗಳು ಬಾಕಿ ಉಳಿಯುವುದನ್ನು ತಪ್ಪಿಸಲು, ಮಧ್ಯಸ್ಥಿಕೆಯಂತಹ ಮಾರ್ಗಗಳನ್ನು ಅನುಸರಿಸಬೇಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.