ADVERTISEMENT

ಒಬಿಸಿ ಗಣತಿ ಕೋರಿ ಅರ್ಜಿ: ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್

ಪಿಟಿಐ
Published 24 ಡಿಸೆಂಬರ್ 2022, 13:03 IST
Last Updated 24 ಡಿಸೆಂಬರ್ 2022, 13:03 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸಂಬಂಧಿಸಿ ಜಾತಿ ಆಧಾರಿತ ಗಣತಿ ನಡೆಸುವಂತೆ ನಿರ್ದೇಶಿಸಲು ಕೋರಿದ ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಅವರನ್ನು ಒಳಗೊಂಡ ನ್ಯಾಯಪೀಠ, ಈ ಸಂಬಂಧ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೂ ನೋಟಿಸ್‌ ಜಾರಿ ಮಾಡಿತು.

ವಕೀಲ ಕ್ರಿಶನ್ ಕನ್ಹಯ್ಯ ಪಾಲ್‌ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಒಬಿಸಿಗಳಿಗೆ ಸಂಬಂಧಿಸಿ ಜಾತಿ ಆಧಾರಿತ ಗಣತಿ ನಡೆದಿಲ್ಲ. ಹಾಗಾಗಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಯೋಜನೆಗಳಿಂದಾಗುವ ಪ್ರಯೋಜನಗಳ ಕುರಿತು ಎಲ್ಲ ವರ್ಗಗಳಿಗೆ ತಿಳಿಸಲು ಸರ್ಕಾರಗಳಿಗೆ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಜಾತಿ ಆಧಾರಿತ ಗಣತಿ ನಡೆಸಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.