ADVERTISEMENT

ಯುವತಿಯರ ಮದುವೆ ವಯಸ್ಸು 18: ಧರ್ಮಾತೀತವಾಗಿರಲಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 19:01 IST
Last Updated 9 ಡಿಸೆಂಬರ್ 2022, 19:01 IST
   

ನವದೆಹಲಿ: ಧರ್ಮಾತೀತವಾಗಿಎಲ್ಲ ಸಮುದಾಯಗಳ ಯುವತಿಯರ ವಿವಾಹ ವಯಸ್ಸನ್ನು 18 ವರ್ಷಕ್ಕೆ ನಿಗದಿಪಡಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿತು.

ಮುಸ್ಲಿಂ ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸಬೇಕೆಂದೂ ರಾಷ್ಟ್ರೀಯ ಮಹಿಳಾ ಆಯೋಗದ ವಕೀಲ ನಿತಿನ್‌ ಸಲುಜಾ ಅವರ ಮೂಲಕ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ (ಪಿಸಿಎಂ) ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು.ಸಂವಿಧಾನದ 14, 15 ಮತ್ತು 21ನೇ ವಿಧಿಗಳಡಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನುಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್ತಿಹಿಡಿಯಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ADVERTISEMENT

ಮುಸ್ಲಿಂ ವೈಯಕ್ತಿಕ ಕಾನೂನುಗಳ ಅನುಸಾರ16 ವರ್ಷದ ಬಾಲಕಿಯ ಮದುವೆಯನ್ನು ಮಾನ್ಯಗೊಳಿಸಿಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಸಿಂಧುತ್ವವನ್ನುಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಈ ಹಿಂದೆ ಪ್ರತ್ಯೇಕವಾಗಿ ಪ್ರಶ್ನಿಸಿತ್ತು.ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.