ADVERTISEMENT

ಅಕ್ರಮ ವಲಸಿಗರ ಗಡೀಪಾರು: ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 14:48 IST
Last Updated 27 ಮಾರ್ಚ್ 2021, 14:48 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ರೋಹಿಂಗ್ಯಾ ಹಾಗೂ ಬಾಂಗ್ಲಾದೇಶದ ನುಸುಳುಕೋರರು ಸೇರಿದಂತೆ ಎಲ್ಲಾ ಅಕ್ರಮ ವಲಸಿಗರನ್ನು ಒಂದು ವರ್ಷದೊಳಗೆ ಪತ್ತೆ ಹಚ್ಚಿ ಬಂಧಿಸಿ ಹಾಗೂ ಗಡೀಪಾರು ಮಾಡಲು ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂಕೋರ್ಟ್‌ ಶನಿವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಹಾಗೂ ವಿ. ರಾಮಸುಬ್ರಮಣಿಯಂ ಅವರನ್ನೊಳಗೊಂಡ ಪೀಠವು ತಿಳಿಸಿತು.

ಜಮ್ಮುವಿನಲ್ಲಿ ರೋಹಿಂಗ್ಯಾ ಸಮುದಾಯದವರ ಬಂಧನ ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಯ ಆದೇಶವನ್ನು ಶುಕ್ರವಾರ ಸುಪ್ರೀಂಕೋರ್ಟ್‌ ಕಾಯ್ದಿರಿಸಿದ್ದು, 2017ರಿಂದ ಬಾಕಿಯಾಗಿರುವ ಅರ್ಜಿಯನ್ನು ಪರಿಶೀಲಿಸುವುದಾಗಿ ನಿರ್ಧರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.