ADVERTISEMENT

ಒಮರ್ ಗೃಹ ಬಂಧನ: ಸುಪ್ರೀಂನಿಂದ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನೋಟಿಸ್

ಏಜೆನ್ಸೀಸ್
Published 14 ಫೆಬ್ರುವರಿ 2020, 10:02 IST
Last Updated 14 ಫೆಬ್ರುವರಿ 2020, 10:02 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅನ್ವಯ ತನ್ನ ಸಹೋದರ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿಟ್ಟಿರುವುದನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸಲ್ಲಿಸಿದ್ದ ಮನವಿ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ಇಂದಿರಾ ಬೆನರ್ಜಿ ಅವರಿದ್ದ ಪೀಠ, ಒಮರ್ ಅಬ್ದುಲ್ಲಾ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಮಾರ್ಚ್ 2ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಸಾರಾ ಅಬ್ದುಲ್ಲಾ ಪೈಲಟ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಈ ವೇಳೆ ಮಾ.2ಕ್ಕೂ ಮುನ್ನವೇ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂಬ ಮನವಿಯನ್ನು ಕೋರ್ಟ್ ನಿರಾಕರಿಸಿದೆ.

ADVERTISEMENT

ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅನ್ವಯ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು.

‘ಒಮರ್ ಬಂಧನವು ಕಾನೂನು ಬಾಹಿರವಾಗಿದೆ ಮತ್ತು ಅವರು 'ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ಬೆದರಿಕೆ' ಎನ್ನುವ ಪ್ರಶ್ನೆಯೇ ಇಲ್ಲ. ಇದು ಸಂವಿಧಾನಿಕ ಹಕ್ಕಾದ ವಾಕ್‌ಸ್ವಾತಂತ್ರ್ಯದ ಉಲ್ಲಂಘನೆ. ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ವ್ಯವಸ್ಥಿತ ಹುನ್ನಾರ. ಹಾಗಾಗಿ ಕೂಡಲೇ ಅವರ ಬಿಡುಗಡೆಗೆ ಆದೇಶಿಸಬೇಕು’ ಎಂದು ಸಾರಾ ಮನವಿ ಮಾಡಿದ್ದರು.

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಆಗಸ್ಟ್‌ 5ರಿಂದಲೂ ಒಮರ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಕಳೆದ ವಾರ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿ ಬಂಧನದ ಅವಧಿಯನ್ನು ವಿಸ್ತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.