ADVERTISEMENT

ಉಪ ಲೋಕಾಯುಕ್ತ ನೇಮಕ ವಿಚಾರ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 15:01 IST
Last Updated 14 ಸೆಪ್ಟೆಂಬರ್ 2020, 15:01 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರ ಸಮ್ಮತಿ ಇಲ್ಲದೇ ಇದ್ದರೂ, ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಎಸ್‌.ಪಾಟೀಲ‌ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಕರ್ನಾಟಕ ಸರ್ಕಾರಕ್ಕೆ ಸೋಮವಾರ ನೋಟಿಸ್‌ ನೀಡಿದೆ.

ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ್‌ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಹಾಗೂ ವಿ.ರಾಮಸುಬ್ರಮಣಿಯನ್‌ ಅವರಿದ್ದ ಪೀಠವು ವಿಚಾರಣೆ ನಡೆಸಿತು. ‘ರಾಜ್ಯ ಸರ್ಕಾರ ಹಾಗೂ ನ್ಯಾಯಮೂರ್ತಿ ಪಾಟೀಲ ಅವರು ನಾಲ್ಕು ವಾರದೊಳಗಾಗಿ ಪ್ರತಿಕ್ರಿಯೆ ನೀಡಬೇಕು’ ಎಂದು ಪೀಠ ಸೂಚಿಸಿತು.

ಹಿರೇಮಠ್‌ ಅವರ ಪರವಾಗಿ ವಕೀಲರಾದ ಪ್ರಶಾಂತ್‌ ಭೂಷಣ್‌‌ ಹಾಗೂ ಅಮಿತ್‌ ಪೈ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಅರ್ಜಿಯನ್ನು ತಿರಸ್ಕರಿಸಿದ ಫೆ.17ರ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಲಾಗಿದ್ದು, ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಪಾಟೀಲ‌ ಅವರನ್ನು ನೇಮಕ ಮಾಡಿ 2019 ನ.20ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.