ADVERTISEMENT

ಟ್ವಿಟರ್‌ ಮಾಜಿ ಎಂಡಿ ಮನೀಶ್‌ ಮಹೇಶ್ವರಿಗೆ ‘ಸುಪ್ರೀಂ‘ ನೋಟಿಸ್‌

ಪಿಟಿಐ
Published 22 ಅಕ್ಟೋಬರ್ 2021, 10:12 IST
Last Updated 22 ಅಕ್ಟೋಬರ್ 2021, 10:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸೂಕ್ಷ್ಮ ಎನ್ನಲಾಗಿದ್ದ ವಿಡಿಯೊ ಅಪ್‌ಲೋಡ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ಟ್ವಿಟರ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನೀಶ್‌ ಮಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್ ಅನ್ನು ಜಾರಿ ಮಾಡಿತು

ತನಿಖೆಗೆ ವ್ಯಕ್ತಿಗತವಾಗಿ ಹಾಜರಾಗಬೇಕು ಎಂದು ಸೂಚಿಸಿ ಹೊರಡಿಸಿದ್ದ ತನ್ನ ಆದೇಶವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ನ ನಿರ್ಧಾರ ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಮುಖ್ಯ ನ್ಯಾಯಮೂರ್ತಿ ಎನ್.ವಿರಮಣ ನೇತೃತ್ವದ ಪೀಠವು, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಅವರು ಸಲ್ಲಿಸಿದ್ದ ಪ್ರತಿಕ್ರಿಯೆಯನ್ನು ಪರಿಗಣಿಸಿತು. ಮನೀಶ್‌ ಮಹೇಶ್ವರಿ ಅವರನ್ನು ಟ್ವಿಟರ್ ಆಡಳಿತವು ಇದೇ ವರ್ಷದ ಆಗಸ್ಟ್‌ ತಿಂಗಳಲ್ಲಿ ಅಮೆರಿಕಕ್ಕೆ ವರ್ಗಾವಣೆ ಮಾಡಿತ್ತು.

ADVERTISEMENT

ನಾವು ನೋಟಿಸ್‌ ನೀಡುತ್ತೇವೆ. ಪ್ರಕರಣದ ವಿಚಾರಣೆ ಆಗಬೇಕಾಗಿದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಹಿಮಾ ಕೊಹ್ಲಿ ಅವರೂ ಇದ್ದ ಪೀಠ ಅಭಿಪ್ರಾಯಪಟ್ಟಿತು.

ಈ ಹಿಂದೆ ಉತ್ತರ ಪ್ರದೇಶದ ಸರ್ಕಾರವು ಗಾಜಿಯಾಬಾದ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಮೂಲಕ ಪ್ರಕರಣದ ತುರ್ತು ವಿಚಾರಣೆ ಕೋರಿ ಅರ್ಜಿಯನ್ನು ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.