ಸುಪ್ರೀಂ ಕೋರ್ಟ್
ನವದೆಹಲಿ: ಹಲವರಿಗೆ ವಂಚಿಸಿದ ಆರೋಪ ಹೊತ್ತ ಮಹಿಳೆಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯವನ್ನು(ಇ.ಡಿ) ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
‘ಈ ವಿಚಾರದಲ್ಲಿ ಇ.ಡಿ ತಳೆದಿರುವ ನಿಲುವು ಒಪ್ಪತಕ್ಕದ್ದಲ್ಲ. ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ವ್ಯಕ್ತಿಗೆ ಯಾವುದೇ ಸಂದರ್ಭದಲ್ಲಿಯೂ ಜಾಮೀನು ನೀಡಬಾರದು ಎಂಬುದು ತನ್ನ ನಂಬಿಕೆ ಎಂದು ಸರ್ಕಾರದ ಈ ನಿಲುವು ತೋರಿಸುವಂತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಅಭಯ್.ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠ, ಆರೋಪಿ ಶಶಿ ಬಾಲಾ ಅವರಿಗೆ ಮಂಜೂರು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.