ADVERTISEMENT

ತ್ರಿವಳಿ ತಲಾಖ್‌: ನಿರೀಕ್ಷಣಾ ಜಾಮೀನು ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 16:28 IST
Last Updated 14 ನವೆಂಬರ್ 2020, 16:28 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಮೂರನೇ ಪತ್ನಿಗೆ ತ್ರಿವಳಿ ತಲಾಖ್‌ ನೀಡಿದ, ಇಬ್ರಾಹಿಂ ಮೊಹಮ್ಮದ್‌ ಇಕ್ಬಾಲ್‌ ಲಕಡಾವಾಲಾ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಬಾಂಬೆ ಹೈಕೋರ್ಟ್‌ ಅಕ್ಟೋಬರ್‌ 21ರಂದು ನಿರೀಕ್ಷಣಾ ಜಾಮೀನು ನಿರಾಕರಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಲಕಡಾವಾಲಾ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ಆದರೆ, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್‌, ದಿನೇಶ್‌ ಮಹೇಶ್ವರಿ ಹಾಗೂ ಸಂಜೀವ್‌ ಖನ್ನಾ ಅವರನ್ನೊಳಗೊಂಡ ಪೀಠವು ಬಾಂಬೆ ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ.

ತ್ರಿವಳಿ ತಲಾಖ್‌ ನೀಡಿರುವುದೂ ಸೇರಿದಂತೆ ವಿವಿಧ ಆರೋಪಗಳನ್ನು ಮಾಡಿ ಅವರ ಮೂರನೇ ಪತ್ನಿ ಲಕಡಾವಾಲಾ ವಿರುದ್ಧ ಆಗಸ್ಟ್‌ 28ರಂದು ಮುಂಬೈಯ ಅಂಬೋಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.