ADVERTISEMENT

‘ಇಬ್ಬರು ಮಕ್ಕಳು’ ನಿಯಮ: ಪಿಐಎಲ್ ವಜಾ

‘ಸರ್ಕಾರಿ ಅಧಿಕಾರಿಗಳಿಗೆ ನಿಮ್ಮ ಅಳಲು ತಿಳಿಸಿ’

ಪಿಟಿಐ
Published 5 ನವೆಂಬರ್ 2018, 19:59 IST
Last Updated 5 ನವೆಂಬರ್ 2018, 19:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಗರಿಷ್ಠ ಇಬ್ಬರು ಮಕ್ಕಳನ್ನಷ್ಟೇ ಹೊಂದುವ ನಿಯಮ ಜಾರಿಗೆ ತರಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

‘ದೇಶದಜನಸಂಖ್ಯೆ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಇದು ಪರಿಸರಕ್ಕೆ ಹಾನಿ ಉಂಟುಮಾಡುತ್ತಿದೆ ಹಾಗೂ ನೈಸರ್ಗಿಕ ಸಂಪನ್ಮೂಲದ ಮೇಲೆ ಒತ್ತಡ ಹೆಚ್ಚಿಸುತ್ತಿದೆ. ಇದರಿಂದ ಮುಂದಿನ ತಲೆಮಾರಿಗೆ ಅಪಾಯವಾಗುವ ಸಾಧ್ಯತೆ ಇದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

‘ಜೀವನ್ ಬಚಾವೊ ಆಂದೋಲನ್‌’ ಎನ್‌ಜಿಒದ ಅನುಪಮ್ ಬಾಜಪೇಯಿ ಅವರು ಸಲ್ಲಿಸಿದ್ದ ಪಿಐಎಲ್‌ ವಜಾಗೊಳಿಸಿದನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ನ್ಯಾಯಪೀಠ, ‘ನಿಮ್ಮ ಅಳಲನ್ನು ಸರ್ಕಾರಿ ಅಧಿಕಾರಿಗಳಿಗೆ ತಿಳಿಸಿ’ ಎಂದು ಹೇಳಿದೆ.

ADVERTISEMENT

ಇಂತಹ ನಿಯಮ ಅನುಸರಿಸಲುಸಾರ್ವಜನಿಕನ್ನು ಪ್ರೋತ್ಸಾಹಿಸುವ ಮತ್ತು ಅದಕ್ಕೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಹ ಅರ್ಜಿಯಲ್ಲಿ ಕೋರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.