ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಶಾಂತ್ ಸಹೋದರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಪ್ರಕರಣದಲ್ಲಿ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ದೂರಿನ ಮೇರೆಗೆ, ಆತನ ಸಹೋದರಿ ಪ್ರಿಯಾಂಕ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈ ಕೋರ್ಟ್‌ನಲ್ಲಿ ಪ್ರಿಯಾಂಕ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈ ಕೋರ್ಟ್ ವಜಾಗೊಳಿಸಿ ಆದೇಶಿಸಿತು. ಈ ಆದೇಶವನ್ನು ಪ್ರಿಯಾಂಕ ಸಿಂಗ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರು ಪ್ರಿಯಾಂಕ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಈ ವಿಷಯದ ವಿಚಾರಣೆ ನಡೆಸಲು ಆಸಕ್ತಿ ಇಲ್ಲ ಎಂದು ಹೇಳಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.