ADVERTISEMENT

ಮುಕ್ತ ಚುನಾವಣೆಗೆ ಮನವಿ: ವಿಚಾರಣೆಗೆ ಅರ್ಜಿ ಪರಿಗಣಿಸಲು ‌’ಸುಪ್ರೀಂ’ ಪೀಠ ನಕಾರ

ಪಿಟಿಐ
Published 25 ಜನವರಿ 2021, 9:33 IST
Last Updated 25 ಜನವರಿ 2021, 9:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತು ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಅರ್ಜಿ ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು, ಅರ್ಜಿದಾರರಾದ ಪುನೀತ್ ಕೌರ್ ಧಾಂಡಾ ಅವರು ಕಾನೂನಿನ ಪರಿಮಿತಿಯಲ್ಲಿ, ಇತರೆ ಪರಿಹಾರ ಕೈಗೊಳ್ಳಲು ಮುಕ್ತರಾಗಿದ್ದಾರೆ ಎಂದು ತಿಳಿಸಿತು.

ವಿಡಿಯೊ ಕಾನ್ಪರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಆರ್. ಸುಭಾಷ್ ರೆಡ್ಡಿ ಅವರೂ ಇದ್ದರು.

ADVERTISEMENT

ವಕೀಲರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಅರ್ಜಿದಾರರು, ರಾಜ್ಯದಲ್ಲಿ ರಾಜಕೀಯ ಕಾರ್ಯಕರ್ತ ಕೊಲೆ ಪ್ರಕರಣ ಕುರಿತು ಸಿಬಿಐ ತನಿಖೆಗೆ ನಿರ್ದೇಶಿಸಬೇಕು ಎಂದು ಕೋರಲಾಗಿತ್ತು. ಬಿಜೆಪಿ ಅಧ್ಯಕ್ಷ ನಡ್ಡಾ ಸೇರಿದಂತೆ ಹಲವು ಮುಖಂಡರ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ಅರ್ಜಿದಾರರು ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.