ADVERTISEMENT

ಏಕರೂಪ ಶಿಕ್ಷಣ ಪದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿ‌ ವಜಾ

ಪಿಟಿಐ
Published 17 ಜುಲೈ 2020, 9:09 IST
Last Updated 17 ಜುಲೈ 2020, 9:09 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ದೇಶದಾದ್ಯಂತ 6ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಸಾಮಾನ್ಯ ಪಠ್ಯಕ್ರಮವನ್ನು ಹೊಂದಿರುವ ಏಕರೂಪದ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್‌) ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

‘ಶಿಕ್ಷಣ ಪದ್ಧತಿ ಬಗ್ಗೆ ನ್ಯಾಯಾಲಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಒಂದು ಶಿಕ್ಷಣ ಮಂಡಳಿಯನ್ನು ಇನ್ನೊಂದಕ್ಕೆ ವಿಲೀನಗೊಳಿಸುವ ಕಾರ್ಯ ನ್ಯಾಯಾಲಯದಲ್ಲ. ಬೇಕಾದರೆ ನೀವು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಬಹುದು’ ಎಂದುಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರುಅರ್ಜಿದಾರರಾದ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ‌ ಅವರಿಗೆ ಸೂಚಿಸಿದ್ದಾರೆ.

‘ಒಂದು ದೇಶ ಒಂದು ಶಿಕ್ಷಣ ಮಂಡಳಿ’ ಎಂಬ ಪದ್ಧತಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಐಸಿಎಸ್‌ಇ ಮತ್ತು ಸಿಬಿಎಸ್‌ಇ ಮಂಡಳಿಯನ್ನು ವಿಲೀನಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.