ADVERTISEMENT

ವೈದ್ಯರಿಗೆ ರಕ್ಷಣೆ: ಡಿಎಂಎ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:17 IST
Last Updated 12 ಜುಲೈ 2024, 16:17 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ನೀಡಲು ನಿರ್ದೇಶನಗಳನ್ನು ಕೋರಿ ದೆಹಲಿ ವೈದ್ಯಕೀಯ ಸಂಘ (ಡಿಎಂಎ) ಸಲ್ಲಿಸಿರುವ  ಅರ್ಜಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇಂತಹ ಪ್ರಕರಣಗಳನ್ನು ಎದುರಿಸಲು ಈಗಾಗಲೇ ಕಾನೂನುಗಳು ಅಸ್ತಿತ್ವದಲ್ಲಿವೆ ಎಂದು ಅದು ಹೇಳಿದೆ.

ಆದಾಗ್ಯೂ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಸಂಜಯ್ ಕರೋಲ್ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠವು, ಯಾವುದೇ ನಿರ್ದಿಷ್ಟ ಹಿಂಸಾಚಾರದ ಸಂದರ್ಭದಲ್ಲಿ ಸೂಕ್ತ ವೇದಿಕೆಗಳನ್ನು ಸಂಪರ್ಕಿಸಲು ಡಿಎಂಎ ಸ್ವತಂತ್ರವಿದೆ ಎಂದು ಹೇಳಿದೆ.

ADVERTISEMENT

ವೈದ್ಯರ ವಿರುದ್ಧ ಹಿಂಸಾಚಾರದ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುವುದರಿಂದ ಇದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಡಿಎಂಎ ಪರವಾಗಿ ಹಾಜರಾದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಮನವಿ ಮಾಡಿದರು. 

‘ಇತ್ತೀಚೆಗೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ವೈದ್ಯರ ವಿರುದ್ಧದ ಹಿಂಸಾಚಾರವು ಗಂಭೀರ ಅಪರಾಧ ಎಂಬ ಫಲಕಗಳನ್ನು ಆಸ್ಪತ್ರೆಯಲ್ಲಿ ಹಾಕಿರುವುದನ್ನು ನಾನು ಗಮನಿಸಿದೆ. ಹಿಂಸಾಚಾರ ತಡೆಗೆ ಈಗಾಗಲೇ ಕಾನೂನುಗಳಿರುವುದನ್ನು ನೀವು ನೋಡಿರುತ್ತೀರಿ. ನ್ಯಾಯಾಲಯವು ಕಾನೂನು ನಿರ್ದೇಶಿಸಲು ಸಾಧ್ಯವಿಲ್ಲ. ಅಂತಹ ಯಾವುದೇ ಘಟನೆಯನ್ನು ತಡೆಯಲು ಪ್ರತಿ ಆಸ್ಪತ್ರೆಯು ಪೊಲೀಸ್ ಭದ್ರತೆ ಹೊಂದಿದೆ’ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ರೋಗಿಗಳ ಸಂಬಂಧಿಕರು ಮತ್ತು ಇತರರಿಂದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ದಾಳಿಗಳನ್ನು ತಡೆಗಟ್ಟಲು ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಡಿಎಂಎ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.