ADVERTISEMENT

ಆಫ್‌ಲೈನ್‌ ಪರೀಕ್ಷೆ ರದ್ದುಗೊಳಿಸಲು ಅರ್ಜಿ: ‘ಸುಪ್ರೀಂ’ ನಿರಾಕರಣೆ

ಪಿಟಿಐ
Published 23 ಫೆಬ್ರುವರಿ 2022, 18:31 IST
Last Updated 23 ಫೆಬ್ರುವರಿ 2022, 18:31 IST
Supreme court of India building in New Delhi, India.Supreme court of India building in New Delhi, India
Supreme court of India building in New Delhi, India.Supreme court of India building in New Delhi, India   

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹಾಗೂ ಇತರ ಶಿಕ್ಷಣಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಯ ಆಫ್‌ಲೈನ್‌ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌, ದಿನೇಶ್‌ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ಪೀಠವು, ‘ಈ
ರೀತಿಯ ಅರ್ಜಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಸುಳ್ಳು ಭರವಸೆಗಳನ್ನು ಮೂಡಿಸುವುದರ ಜತೆಗೆ ಗೊಂದಲಗಳನ್ನು ಮೂಡಿಸುತ್ತದೆ’ ಎಂದು ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT