ADVERTISEMENT

ಕ್ರಿಪ್ಟೊ ವಹಿವಾಟಿಗೆ ಮಾರ್ಗಸೂಚಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಪಿಟಿಐ
Published 11 ನವೆಂಬರ್ 2023, 14:23 IST
Last Updated 11 ನವೆಂಬರ್ 2023, 14:23 IST
<div class="paragraphs"><p> ‘ಸುಪ್ರೀಂ’ ನಕಾರ</p></div>

‘ಸುಪ್ರೀಂ’ ನಕಾರ

   

ನವದೆಹಲಿ (ಪಿಟಿಐ): ಕ್ರಿಪ್ಟೊ ಕರೆನ್ಸಿ ವಹಿವಾಟುಗಳ ನಿಯಂತ್ರಣಕ್ಕಾಗಿ ಮಾರ್ಗಸೂಚಿ ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಅರ್ಜಿಯಲ್ಲಿ ಉಲ್ಲೇಖಿಸಿರುವ ವಿಚಾರವು ಶಾಸಕಾಂಗದ ನಿರ್ದೇಶನದ ಸ್ವರೂಪದಲ್ಲಿದೆ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ADVERTISEMENT

ಕ್ರಿಪ್ಟೊ ಕರೆನ್ಸಿ ಸಂಬಂಧಿತ ಪ್ರಕರಣದಲ್ಲಿ ಜಾಮೀನು ಪಡೆಯುವುದು ಅರ್ಜಿದಾರರ ಮೂಲ ಉದ್ದೇಶವಾಗಿದೆ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್‌ ವಿಶ್ರಾ ಅವರನ್ನೂ ಒಳಗೊಂಡಿದ್ದ ನ್ಯಾಯಪೀಠ ಹೇಳಿದೆ.

‘ಅರ್ಜಿದಾರರಿಗೆ ಜಾಮೀನಿಗಾಗಿ ಸೂಕ್ತ ನ್ಯಾಯಾಲಯದ ಮೊರೆ ಹೋಗುವ ಸ್ವಾತಂತ್ರ್ಯವಿದೆ’ ಎಂದೂ ಹೇಳಿದೆ.

ಕ್ರಿಪ್ಟೊ ಕರೆನ್ಸಿ ಪ್ರಕರಣದಲ್ಲಿ ಆರೋಪಿಯಾಗಿರುವ ಉತ್ತರಪ್ರದೇಶದ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.