ADVERTISEMENT

ನೀಟ್‌ ಪಿಜಿ ಪರೀಕ್ಷೆ ಮುಂದೂಡಲು ‘ಸುಪ್ರೀಂ’ ನಕಾರ

ಪಿಟಿಐ
Published 13 ಮೇ 2022, 20:59 IST
Last Updated 13 ಮೇ 2022, 20:59 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು(ಪಿಜಿ-2022) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರೀಕ್ಷೆ ಮುಂದೂಡುವುರಿಂದ ವೈದ್ಯರ ಕೊರತೆಯಾಗಲಿದ್ದು, ರೋಗಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ನ್ಯಾಯಾಲಯ ಹೇಳಿದೆ.

ಶುಕ್ರವಾರ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ, 'ಪರೀಕ್ಷೆ ಮುಂದೂಡುವುದರಿಂದ ಅವ್ಯವಸ್ಥೆ ಮತ್ತು ಅನಿಶ್ಚಿತತೆ ಸೃಷ್ಟಿಯಾಗಲಿದೆ. ಅಲ್ಲದೆ ನೀಟ್ ಪರೀಕ್ಷೆ ಬರೆಯಲು ಈಗಾಗಲೇ ನೋಂದಣಿ ಮಾಡಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ' ಎಂದು ಅಭಿಪ್ರಾಯಪಟ್ಟಿದೆ.

ಕೊರೊನಾ ಕಾರಣದಿಂದ ಈಗಾಗಲೇ ಪರಿಸ್ಥಿತಿ ಹಳಿತಪ್ಪಿದಂತಾಗಿದೆ. ಹೀಗಾಗಿ ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪಾಲಿಸಲೇಬೇಕು ಎಂದು ಹೇಳಿದೆ.

ADVERTISEMENT

2022ನೇ ಸಾಲಿನ ನೀಟ್-ಪಿಜಿ ಪರೀಕ್ಷೆಯು ಮೇ 21ಕ್ಕೆ ನಿಗದಿಯಾಗಿದೆ. ಇದನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮೇ 10ರಂದು ನ್ಯಾಯಾಲಯ ಒಪ್ಪಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.