ADVERTISEMENT

ಔರಂಗಾಬಾದ್‌ ಮರುನಾಮಕರಣ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 24 ಮಾರ್ಚ್ 2023, 12:53 IST
Last Updated 24 ಮಾರ್ಚ್ 2023, 12:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್‌ ನಗರವನ್ನು ‘ಛತ್ರಪತಿ ಸಂಭಾಜಿ ನಗರ’ ಎಂದು ಮರುನಾಮಕರಣ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

‘ಬಾಂಬೆ ಹೈಕೋರ್ಟ್‌ ಇದನ್ನು ಇತ್ಯರ್ಥಪಡಿಸಲಿದೆ. ಅಲ್ಲಿಗೆ ಹೋಗಿ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠ ತಿಳಿಸಿತು.

‘ಈ ವಿಷಯದ ವಿಚಾರಣೆಗೆ ಹೈಕೋರ್ಟ್‌ ಮಾ.27ರಂದು ದಿನಾಂಕ ನಿಗದಿಪಡಿಸಿದೆ’ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಬಳಿಕ ನ್ಯಾಯಾಯಲವು, ‘ವಿಷಯವು ಮೊದಲಿಗೆ ಅಲ್ಲಿಯೇ ಇರ್ತರ್ಥವಾಗಲಿ’ ಎಂದು ತಿಳಿಸಿತು.

ADVERTISEMENT

ಔರಂಗಾಬಾದ್‌ ನಗರದ ಹೆಸರನ್ನು ಬದಲಾಯಿಸುವ ಪ್ರಸ್ತಾವಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನುಮೋದನೆ ನೀಡಿದ್ದನ್ನು ಪ್ರಶ್ನಿಸಿ ಮಹಮ್ಮದ್‌ ಮುಶ್ತಕ್‌ ಅಹ್ಮದ್‌ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.