ADVERTISEMENT

ಸಿ.ಇ.ಸಿ, ಇ.ಸಿ ನೇಮಕ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 12 ಜನವರಿ 2024, 15:54 IST
Last Updated 12 ಜನವರಿ 2024, 15:54 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಇಲ್ಲದ ಸಮಿತಿಯೊಂದಕ್ಕೆ ನೀಡಿರುವ ಹೊಸ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಹೊಸ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಲು ಒಪ್ಪಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರು ಇರುವ ವಿಭಾಗೀಯ ಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿದೆ.

ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ವಿಕಾಸ್ ಸಿಂಗ್ ‘ಈ ಕಾನೂನಿಗೆ ದಯವಿಟ್ಟು ತಡೆಯಾಜ್ಞೆ ನೀಡಬೇಕು’ ಎಂದು ಕೋರಿದರು. ‘ಇನ್ನೊಂದು ಕಡೆಯವರ ವಾದ ಆಲಿಸದೆ ನಾವು ಹಾಗೆ ಮಾಡಲಾಗದು’ ಎಂದು ಪೀಠವು ಹೇಳಿತು.

ADVERTISEMENT

ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಲ್ಲಿ ಹೊಸ ಕಾನೂನಿನ ಪ್ರಕಾರ ಸಿಜೆಐ ಅವರಿಗೆ ಸ್ಥಾನ ಇಲ್ಲ. ಇದು ಹಲವರ ಆಕ್ಷೇಪಕ್ಕೆ ಕಾರಣವಾಗಿದೆ. ಕಾನೂನನ್ನು ಪ್ರಶ್ನಿಸಿ ಹಲವರು ಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.