
ಪಿಟಿಐ
ನವದೆಹಲಿ: ‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಟ್ರೇಲರ್ ಹಾಗೂ ಚಿತ್ರ ಬಿಡುಗಡೆಗೆ ನಿಷೇಧ ಹೇರಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಇದನ್ನು ಪರಿಗಣಿಸಲು ನಿರಾಕರಿಸಿ ಸೋಮವಾರ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠದ ಎದುರು ಗುರುವಾರ ತುರ್ತು ವಿಚಾರಣೆಗೆ ಇರಿಸಲಾಗಿತ್ತು. ಆದರೆ ಇದನ್ನು ಸಾಮಾನ್ಯ ಅರ್ಜಿಯಂತೆಯೇ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ.
ಅನುಪಮ್ ಖೇರ್ ಅಭಿನಯದ ಈಚಿತ್ರ ಶುಕ್ರವಾರ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.