ADVERTISEMENT

ಪಕ್ಷಗಳ ಧ್ವಜದಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಬಳಕೆಗೆ ಆಕ್ಷೇಪ: PIL ವಜಾ

ಪಿಟಿಐ
Published 22 ಜುಲೈ 2025, 10:35 IST
Last Updated 22 ಜುಲೈ 2025, 10:35 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಪಕ್ಷಗಳ ಧ್ಯಜದಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಬಳಸುತ್ತಿರುವ ಆರೋಪದ ಮೇಲೆ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಖುದ್ದಾಗಿ ಹಾಜರಿದ್ದ ಸಂಜಯ್ ಭೀಮಾಶಂಕರ್ ಥೋಬ್ಡೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿತು.

ಕೆಲವು ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಪ್ರಚಾರಗಳಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹೋಲುವ ಧ್ವಜ ವಿನ್ಯಾಸಗಳನ್ನು ಬಳಸುತ್ತಿವೆ. ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರವಿರುವ ಜಾಗದಲ್ಲಿ ಪಕ್ಷದ ಚಿಹ್ನೆಗಳನ್ನು ಬಳಸಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ADVERTISEMENT

ನಿರ್ದಿಷ್ಟವಾಗಿ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಹೆಸರಿಸಿದೆ.

ಇದು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ, 1971ರ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

‘ಅವರು ಯಾವಾಗಿನಿಂದ ಅದನ್ನು ಮಾಡುತ್ತಿದ್ದಾರೆ? ಕೆಲವು ಪಕ್ಷಗಳು ಸ್ವಾತಂತ್ರ್ಯ ಬಂದಾಗಿನಿಂದ ಬಳಕೆ ಮಾಡುತ್ತಿವೆ’ ಎಂದು ಹೇಳಿದ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.