ನವದೆಹಲಿ: ಚುನಾವಣಾ ಚಿಹ್ನೆಗಳ ಹಂಚಿಕೆಗೆ ಸಂಬಂಧಿಸಿದಂತೆ ವಿವಾದವನ್ನು ಎತ್ತಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಇದು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದೆ.
‘ಚುನಾವಣಾ ಆಯೋಗಕ್ಕೆ ಚಿಹ್ನೆಯನ್ನು ನಿಗದಿಪಡಿಸುವ ಅಧಿಕಾರವಿಲ್ಲ’ ಎಂದು ಪ್ರತಿಪಾದಿಸಿದ್ದ ಅರ್ಜಿಯನ್ನು ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎ.ಎಸ್. ಓಕಾ ಅವರನ್ನೊಳಗೊಂಡ ನ್ಯಾಯಪೀಠವು, ‘ಅರ್ಜಿದಾರರು ಚುನಾವಣಾ ಆಯೋಗದ ನಿಯಮಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.ವಾಸ್ತವವಾಗಿ ಇದು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ’ ಎಂದು ಹೇಳಿದೆ.
‘ಇದು ನ್ಯಾಯಾಂಗದ ಸಮಯವನ್ನು ಸಂಪೂರ್ಣ ವ್ಯರ್ಥಗೊಳಿಸಿದೆ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ₹ 25 ಸಾವಿರ ವೆಚ್ಚ ಭರಿಸಲು ಸೂಚಿಸಿ, ಅರ್ಜಿಯನ್ನು ವಜಾಗೊಳಿಸುತ್ತೇವೆ’ ಎಂದೂ ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.