ADVERTISEMENT

ಎಸ್ಸೆಸ್ಸೆಲ್ಸಿಗೆ ಪರೀಕ್ಷೆಗೆ ತಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 29 ಜೂನ್ 2020, 6:55 IST
Last Updated 29 ಜೂನ್ 2020, 6:55 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿಯ ಉಳಿದ ವಿಷಯಗಳ ಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಭಾನುವಾರ ವಜಾಗೊಳಿಸಿದೆ.

ರಾಜಸ್ಥಾನದಲ್ಲಿ ಹತ್ತನೇತರಗತಿಯ ಎರಡು ವಿಷಯಗಳಿಗೆ ಜೂನ್‌ 29 ಮತ್ತು 30ರಂದು ಪರೀಕ್ಷೆ ನಡೆಯಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಯ ತಾಯಿ ದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಡಿಯೊ ಸಂವಾದದ ಮೂಲಕ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್‌ವಿಲ್ಕರ್‌, ದಿನೇಶ್‌ ಮಹೇಶ್ವರಿ ಮತ್ತು ಸಂಜೀವ್‌ ಖನ್ನಾ ಅವರಿದ್ದ ಪೀಠ, ಅರ್ಜಿಯನ್ನು ವಜಾಗೊಳಿಸಿತು ಎಂದು ರಾಜ್ಯ ಸರ್ಕಾರದ ಪರ ವಕೀಲ ಮನೀಷ್‌ ಸಿಂಘ್ವಿ ತಿಳಿಸಿದ್ದಾರೆ.

‘11.86 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಮಾಡಲಾಗಿತ್ತು. ಈ ಕೇಂದ್ರಗಳಲ್ಲಿ ಈಗ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸೋಂಕು ತಗಲುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.