ADVERTISEMENT

ಗುಜರಾತ್‌ ಗಲಭೆ: ಜಾಕಿಯಾ ಅರ್ಜಿ ವಿಚಾರಣೆ, ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 14:18 IST
Last Updated 9 ಡಿಸೆಂಬರ್ 2021, 14:18 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: 2002ರ ಗುಜರಾತ್‌ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ಕ್ಲೀನ್‌ಚಿಟ್‌ ನೀಡಿರುವುದನ್ನು ಪ್ರಶ್ನಿಸಿ ಹತ್ಯೆಗೀಡಾದ ಕಾಂಗ್ರೆಸ್ ಮುಖಂಡ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠದ ಮುಂದೆ ಎಸ್‌ಐಟಿ ಪರವಾಗಿ ಹಾಜರಾದ ವಕೀಲ ಮುಕುಲ್‌ ರೋಹಟಗಿ, ‘ಗುಜರಾತ್‌ ಹೈಕೋರ್ಟ್‌ ಮತ್ತು ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಅನುಮೋದಿಸಬೇಕು’ ಎಂದು ಕೋರಿದ್ದಾರೆ.

‘ಎರಡನೇ ದೂರುದಾರರಾದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರು ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತಂದಿದ್ದು, ಈ ರೀತಿಯಾದರೆ ಇದು ಮುಗಿಯದ ಪ್ರಕರಣವಾಗಬಹುದು’ ಎಂದೂ ರೋಹಟಗಿ ಅವರು ಆರೋಪಿಸಿದ್ದಾರೆ.

ADVERTISEMENT

ದೂರುದಾರರ ಪರವಾಗಿ ಹಾಜರಾದ ಕಪಿಲ್‌ ಸಿಬಲ್‌ ಅವರು ತೀಸ್ತಾ ಸೆಟಲ್‌ವಾಡ್‌ ಅವರ ಸಂಸ್ಥೆ ಮಾಡಿರುವ ಕೆಲಸಗಳನ್ನು ಉಲ್ಲೇಖಿಸಿದರು. ಯಾರನ್ನಾದರೂ ಗುಜರಾತ್‌ ವಿರೋಧಿ ಎಂದು ಬಣ್ಣಿಸುವುದು ಅನ್ಯಾಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.