ADVERTISEMENT

ನೀಟ್‌–ಪಿಜಿ: ವಿಶೇಷ ಕೌನ್ಸೆಲಿಂಗ್‌ ಕುರಿತು ಇಂದು ತೀರ್ಪು

ಪಿಟಿಐ
Published 9 ಜೂನ್ 2022, 19:45 IST
Last Updated 9 ಜೂನ್ 2022, 19:45 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ‘ನೀಟ್‌ ಪಿಜಿ–21’ರಲ್ಲಿ ಅರ್ಹತೆ ಪಡೆದವರಿಗಾಗಿ ನಡೆದ ಅಖಿಲ ಭಾರತ ಕೋಟಾದ ಕೌನ್ಸೆಲಿಂಗ್‌ ನಂತರವೂ ಉಳಿದಿರುವ 1,456 ಸೀಟುಗಳ ಭರ್ತಿಗೆ, ಇನ್ನೊಂದು ಸುತ್ತಿನ ವಿಶೇಷ ಕೌನ್ಸೆಲಿಂಗ್‌ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತ ಆದೇಶವನ್ನು ಸುಪ್ರೀಂಕೋರ್ಟ್‌ ಗುರುವಾರ ಕಾಯ್ದಿರಿಸಿತು.

ಕಕ್ಷಿದಾರರ ಪರ ವಕೀಲರು ತಮ್ಮ ವಾದವನ್ನು ಪೂರ್ಣಗೊಳಿಸಿದ ಬಳಿಕ ಶುಕ್ರವಾರ ತನ್ನ ಆದೇಶ ಪ್ರಕಟಿಸುವುದಾಗಿ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅವರ ಪೀಠ ತಿಳಿಸಿದೆ.

ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಬಲ್ಬೀರ್ ಸಿಂಗ್ ಅವರು, ಈಗಾಗಲೇ ಫೆಬ್ರುವರಿಯಲ್ಲಿ ತರಗತಿಗಳು ಪ್ರಾರಂಭವಾಗಿದೆ.ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಿದರೆ ನೀಟ್‌ 2022ರಲ್ಲಿ ಪ್ರವೇಶ ಪಡೆಯುವವರಿಗೆ ನಡೆಯುವ ಬೋಧನಾ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.