ADVERTISEMENT

ದುರ್ಬಲ ವರ್ಗದವರಿಗೆ ಶೇ 10 ಮೀಸಲಾತಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 27 ಸೆಪ್ಟೆಂಬರ್ 2022, 11:07 IST
Last Updated 27 ಸೆಪ್ಟೆಂಬರ್ 2022, 11:07 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್‌) ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್‌, ಮಂಗಳವಾರ ತನ್ನ ತೀರ್ಪನ್ನು ಕಾಯ್ದಿರಿಸಿತು.

ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್‌ ನೇತೃತ್ವದ ಐವರು ಸದಸ್ಯರನ್ನು ಒಳಗೊಂಡ ಸಾಂವಿಧಾನಿಕ ಪೀಠವು ಈ ವಿಷಯಕ್ಕೆ ಸಂಬಂಧಿಸಿ ಕಳೆದ ಆರು ದಿನಗಳ ಕಾಲ ವಾದ–ಪ್ರತಿವಾದಗಳನ್ನು ಆಲಿಸಿದೆ. ನ್ಯಾಯಮೂರ್ತಿಗಳಾದ ದಿನೇಶ ಮಾಹೇಶ್ವರಿ, ಎಸ್‌.ರವೀಂದ್ರ ಭಟ್‌, ಬೇಲಾ ಎಂ.ತ್ರಿವೇದಿ ಹಾಗೂ ಜೆ.ಬಿ.ಪಾರ್ದಿವಾಲಾ ಅವರು ಈ ಪೀಠದಲ್ಲಿದ್ದಾರೆ.

ಈ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ರವಿವರ್ಮ ಕುಮಾರ್, ಪಿ.ವಿಲ್ಸನ್, ಮೀನಾಕ್ಷಿ ಅರೋರಾ, ಸಂಜಯ್‌ ಪಾರೀಖ್‌ ಹಾಗೂ ಇತರರು ವಾದ ಮಂಡಿಸಿದ್ದರು.

ADVERTISEMENT

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹಾಗೂ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಅವರು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.