ADVERTISEMENT

ಆರ್‌ಟಿಐ ವ್ಯಾಪ್ತಿಗೆ ಸಿಜೆಐ ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಪಿಟಿಐ
Published 4 ಏಪ್ರಿಲ್ 2019, 18:58 IST
Last Updated 4 ಏಪ್ರಿಲ್ 2019, 18:58 IST

ನವದೆಹಲಿ: ಸುಪ್ರೀಂ ಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೆಸೇರುವ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಸಿಜೆಐಹಾಗೂ ಸುಪ್ರೀಂ ಕೋರ್ಟ್‌, ಸಾರ್ವಜನಿಕ ಸ್ವಾಮ್ಯಕ್ಕೆ ಸೇರುತ್ತದೆ ಎಂದು ದೆಹಲಿ ಹೈಕೋರ್ಟ್ ಆದೇಶನೀಡಿತ್ತು. ಇದನ್ನು ಪ್ರಶ್ನಿಸಿ ಸ್ವತಃ ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರೀಯ ಸಾರ್ವಜನಿಕ ಸಂಪರ್ಕಾಧಿಕಾರಿ,ಸರ್ವೋಚ್ಛ ನ್ಯಾಯಾಲಯಕ್ಕೆ 2010ರಲ್ಲಿ ಮೂರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ, ಗುರುವಾರ ತೀರ್ಪು ಕಾದಿರಿಸಿತು.

ADVERTISEMENT

ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಕೊಲಿಜಿಯಂ ನಡೆಸಿದ ಚರ್ಚೆಯಂತಹ ಗೋಪ್ಯಮಾಹಿತಿ, ಆರ್‌ಟಿಐ ಅಡಿ ಬಹಿರಂಗವಾಗುವುದರಿಂದ ನ್ಯಾಯಾಂಗದ ಕಾರ್ಯನಿರ್ವಹಣೆಗೆ ‘ಧಕ್ಕೆಯಾಗಲಿದೆ’ ಎಂದು ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿ ಬುಧವಾರ ನ್ಯಾಯಪೀಠಕ್ಕೆ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.