ADVERTISEMENT

ದೇಶದ್ರೋಹ ಆರೋಪ: ಪತ್ರಕರ್ತ ವಿನೋದ್ ದುವಾ ಬಂಧನಕ್ಕೆ ‘ಸುಪ್ರೀಂ’ ತಡೆ

ದೇಶದ್ರೋಹ ಪ್ರಕರಣ: ತನಿಖೆಗೆ ತಡೆ ನೀಡಲು ನಕಾರ

ಪಿಟಿಐ
Published 14 ಜೂನ್ 2020, 7:39 IST
Last Updated 14 ಜೂನ್ 2020, 7:39 IST
Supreme Court
Supreme Court   

ನವದೆಹಲಿ: ಪತ್ರಕರ್ತ ವಿನೋದ್‌ ದುವಾ ಅವರನ್ನು ಜುಲೈ 6ರ ವರೆಗೆ ಬಂಧಿಸದಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ. ಆದರೆ, ಅವರ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಗೆ ತಡೆ ನೀಡಲು ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್‌, ಎಂ.ಎಂ.ಶಾಂತನಗೌಡರ್ ಹಾಗೂ ವಿನೀತ್‌ ಸರನ್‌ ಅವರಿರುವ ನ್ಯಾಯಪೀಠ ಭಾನುವಾರ ವಿಶೇಷ ವಿಚಾರಣೆ ನಡೆಸಿತು.

ದುವಾ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದ ನ್ಯಾಯಪೀಠ, ಪ್ರಕರಣ ಕುರಿತಂತೆ ಎರಡು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಹಿಮಾಚಲ ಪ್ರದೇಶ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಿತು.

ADVERTISEMENT

ಯುಟ್ಯೂಬ್‌ನಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಪೊಲೀಸರು ದುವಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.