ADVERTISEMENT

ಅಂಗವಿಕಲರಿಗಾಗಿ ಕೆವೈಸಿ ಮಾರ್ಗಸೂಚಿ ಬದಲಾವಣೆಗೆ ಸುಪ್ರೀಂ ಕೋರ್ಟ್‌ ಸೂಚನೆ

ಪಿಟಿಐ
Published 30 ಏಪ್ರಿಲ್ 2025, 13:48 IST
Last Updated 30 ಏಪ್ರಿಲ್ 2025, 13:48 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಅಂಗವಿಕಲರು ಮತ್ತು ಆ್ಯಸಿಡ್‌ ದಾಳಿ ಸಂತ್ರಸ್ತರಿಗಾಗಿ ಇ–ಕೆವೈಸಿ ಮಾರ್ಗಸೂಚಿಯಲ್ಲಿ ಬದಲಾವಣೆ ತರುವಂತೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿದೆ.

ಡಿಜಿಟಲ್ ಆ್ಯಕ್ಸೆಸ್ ಪಡೆಯುವ ಹಕ್ಕು ಸಂವಿಧಾನದ 21ನೇ ವಿಧಿಯಡಿಯಲ್ಲಿ ಬರುವ ಬದುಕುವ ಹಕ್ಕಿನ ಅಂತರ್ಗತ ಭಾಗ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ADVERTISEMENT

ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹದೇವನ್‌ ಅವರನ್ನು ಒಳಗೊಂಡ ನ್ಯಾಯಪೀಠವು, ‘ಅಂಗವಿಕಲರು ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರು ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಮಾರ್ಗಸೂಚಿಯಲ್ಲಿ ಬದಲಾವಣೆ ತರುವುದು ಅಗತ್ಯ. ಬ್ಯಾಂಕ್‌ ಖಾತೆ ತೆರೆಯಲು ಮತ್ತು  ಕಲ್ಯಾಣ ಯೋಜನೆಗಳ ಸದುಪಯೋಗ ಪಡೆಯಲು ಅದು ನೆರವಾಗಲಿದೆ’ ಎಂದು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.