ADVERTISEMENT

ಪೌರತ್ವ (ತಿದ್ದುಪಡಿ) ಕಾಯ್ದೆ ತಡೆಗೆ 'ಸುಪ್ರೀಂ' ನಕಾರ

ಸಿಎಎ ವಿರುದ್ಧದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಗಡುವು

ಪಿಟಿಐ
Published 22 ಜನವರಿ 2020, 21:04 IST
Last Updated 22 ಜನವರಿ 2020, 21:04 IST
   

ನವದೆಹಲಿ:ಪೌರತ್ವ (ತಿದ್ದುಪಡಿ) ಕಾಯ್ದೆಗೆ (ಸಿಎಎ) ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಅಲ್ಲದೆ ಸಿಎಎ ವಿರುದ್ಧದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.

ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳದೆ ಪೌರತ್ವ (ತಿದ್ದುಪಡಿ) ಕಾಯ್ದೆಗೆ ತಡೆ ನೀಡಲು ಸಾಧ್ಯವಿಲ್ಲ.ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಸಿಎಎಗೆ ಸಂಬಂಧಿಸಿದ 143 ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಅವರನ್ನೊಳಗೊಂಡ ನ್ಯಾಯಪೀಠ,ಈಗ ಸಲ್ಲಿಕೆಯಾಗಿರುವ ಅರ್ಜಿಗಳು ಬಗೆಹರಿಯದ ಹೊರತು ಸಿಎಎ ಸಂಬಂಧಿತ ಅರ್ಜಿಗಳ ವಿಚಾರಣೆ ನಡೆಸದಂತೆ ಎಲ್ಲಾ ಹೈಕೋರ್ಟ್‌ಗಳಿಗೂ ನಿರ್ಬಂಧ ಹೇರಿದೆ.

ADVERTISEMENT

ಅಸ್ಸಾಂ ಮತ್ತು ತ್ರಿಪುರದಲ್ಲಿ ಸಿಎಎ ಸಂಬಂಧಿತ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿರುವುದರಿಂದ ಈ ಎರಡು ರಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುವುದು ಎಂದುನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೂ ಒಳಗೊಂಡ ನ್ಯಾಯಪೀಠ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.