ADVERTISEMENT

ಶ್ರೀಕಾಂತ್‌ ಮೊಹ್ತಾ ಜಾಮೀನು ಅರ್ಜಿ: ಸಿಬಿಐ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 14:41 IST
Last Updated 25 ಡಿಸೆಂಬರ್ 2020, 14:41 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ರೋಸ್‌ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಬಂಧನಕ್ಕೆ ಒಳಗಾಗಿದ್ದ ಬೆಂಗಾಳಿ ಚಿತ್ರ ನಿರ್ಮಾಪಕ ಶ್ರೀಕಾಂತ್‌ ಮೊಹ್ತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸಿಬಿಐ ಪ್ರತಿಕ್ರಿಯೆ ಕೇಳಿದೆ.

ಶ್ರೀ ವೆಂಕಟೇಶ ಫಿಲ್ಮ್ಸ್‌ ಪ್ರೈ.ಲಿ. ಸಹ ಸಂಸ್ಥಾಪಕರಾಗಿರುವ ಮೊಹ್ತಾ, ಚಿತ್ರ ನಿರ್ಮಾಣದ ಹೆಸರಿನಲ್ಲಿ ರೋಸ್‌ ವ್ಯಾಲಿ ಗ್ರೂಪ್‌ ಅಂಗಸಂಸ್ಥೆಯಾದ ಬ್ರ್ಯಾಂಡ್‌ ವ್ಯಾಲ್ಯೂ ಕಮ್ಯನಿಕೇಷನ್ಸ್‌ ಲಿ. ಜೊತೆ ಒಪ್ಪಂದ ಮಾಡಿಕೊಂಡು ಕೋಟ್ಯಾಂತರ ರೂಪಾಯಿ ಲಪಟಾಯಿಸಿದ ಆರೋಪ ಹೊತ್ತಿದ್ದಾರೆ. ಇವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಮೂರು ಬಾರಿ ತಿರಸ್ಕರಿಸಿತ್ತು.

ಡಿ.1ರಂದು ಒಡಿಶಾ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೊಹ್ತಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಹೇಮಂತ್‌ ಗುಪ್ತಾ ಅವರಿದ್ದ ಪೀಠವು, ಜ.4ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸಿಬಿಐಗೆ ನೋಟಿಸ್‌ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.