ನವದೆಹಲಿ: ದೇಶದಲ್ಲಿ ಕೋವಿಡ್–19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಹಾಲುಣಿಸುತ್ತಿರುವ ಬಡ ತಾಯಂದಿರಿಗೆ ಯಾವ ರೀತಿಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ವರದಿ ಕೇಳಿದೆ.
ಬಡ ತಾಯಂದಿರಿಗೆ ಧನಸಹಾಯದ ಪರಿಹಾರ ನೀಡಬೇಕೆಂದು ಕೋರಿ, ಸರ್ಕಾರೇತರ ಸಂಸ್ಥೆಯೊಂದು (ಎನ್‌ಜಿಒ) ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಆರ್.ಸುಭಾಷ್ ರೆಡ್ಡಿ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು, ಹಾಲುಣಿಸುವ ಬಡ ತಾಯಂದಿರಿಗೆ ಸಹಾಯಕ್ಕೆ ಕೈಗೊಂಡಿರುವ ಕ್ರಮಗಳ ವಿವರ ಕುರಿತು ವರದಿ ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆಮಂಗಳವಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.