ADVERTISEMENT

ಕೃತಿಸ್ವಾಮ್ಯ: ಇಳೆಯರಾಜ ಸಂಸ್ಥೆಗೆ ಸುಪ್ರೀಂ ಕೋರ್ಟ್ ನೋಟಿಸ್‌

ಪಿಟಿಐ
Published 15 ಅಕ್ಟೋಬರ್ 2025, 14:29 IST
Last Updated 15 ಅಕ್ಟೋಬರ್ 2025, 14:29 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ಪಿಟಿಐ

ನವದೆಹಲಿ: ಕೃತಿಸ್ವಾಮ್ಯ ಪ್ರಕರಣಕ್ಕೆ ಸಂಬಂಧಿಸಿ ‘ಇಳಯರಾಜ ಮ್ಯೂಸಿಕ್‌ ಎನ್‌. ಮ್ಯಾನೇಜ್‌ಮೆಂಟ್‌ ಪ್ರೈ ಲಿ.’ ಕಂಪನಿಯು ಮದ್ರಾಸ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಸೋನಿ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ನ್ಯಾಯಾಲಯವು ಸಂಗೀತ ಕಂಪನಿಗೆ ನೋಟಿಸ್ ನೀಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್‌ ಚಂದ್ರನ್‌ ಅವರು ಬುಧವಾರ ಅರ್ಜಿಯ ವಿಚಾರಣೆ ನಡೆಸಿದರು. ವಿವಿಧ ಸಿನಿಮಾಗಳ ಸುಮಾರು 536 ಹಾಡುಗಳ ಕೃತಿಸ್ವಾಮ್ಯ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಹಾಡುಗಳ ಕೃತಸ್ವಾಮ್ಯವು ಸೋನಿ ಸಂಸ್ಥೆ ಬಳಿ ಇವೆ.

ADVERTISEMENT

ಸೋನಿ ಸಂಸ್ಥೆ ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಮದ್ರಾಸ್‌ ಹೈಕೋರ್ಟ್‌ಗೆ ಹಸ್ತಾಂತರಿಸುವಂತೆ ಕೋರಿ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜುಲೈ 28ರಂದು ನ್ಯಾಯಾಲಯ ತಿರಸ್ಕರಿಸಿತ್ತು.

‘ಇದೇ ಪ್ರಕರಣವು ಈಗಾಗಲೇ ಬಾಂಬೆ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಇಳಯರಾಜ ಅವರು 536 ಹಾಡುಗಳಿಗೆ ಹೊರತಾಗಿ, ಮತ್ತೆ ಹೊಸ ಹಾಡುಗಳನ್ನು ಸೇರಿಸಿ ಪ್ರಕರಣ ದಾಖಲಿಸಿದ್ದಾರೆ’ ಎಂದು ಸೋನಿ ಸಂಸ್ಥೆ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.