ನವದೆಹಲಿ: ಪತ್ನಿಯೊಂದಿಗೆ ವೈವಾಹಿಕ ಸಂಬಂಧ ನಿರ್ವಹಿಸಬೇಕು ಹಾಗೂ ಆಕೆಯೊಂದಿಗೆ ಘನತೆಯಿಂದ ನಡೆದುಕೊಳ್ಳಬೇಕು ಎಂಬ ಷರತ್ತಿನೊಂದಿಗೆ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಿ ಜಾರ್ಖಂಡ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ದೀಪಂಕರ್ ದತ್ತಾ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು, ಈ ರೀತಿಯ ಷರತ್ತಿನೊಂದಿಗೆ ಹೈಕೋರ್ಟ್ ಜಾಮೀನು ನೀಡಬಾರದಿತ್ತು ಇದರಿಂದ ಮತ್ತಷ್ಟು ವ್ಯಾಜ್ಯ ಉಂಟಾಗಬಹುದು ಎಂದು ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.