ADVERTISEMENT

ವರ್ಮಾ ವಜಾ ಆದೇಶಕ್ಕೆ ಒಂದು ವಾರದ ತಡೆ

ಪಿಟಿಐ
Published 19 ಸೆಪ್ಟೆಂಬರ್ 2022, 12:47 IST
Last Updated 19 ಸೆಪ್ಟೆಂಬರ್ 2022, 12:47 IST
.
.   

ನವದೆಹಲಿ: ಇಶ್ರತ್‌ ಜಹಾನ್‌ ಎನ್‌ಕೌಂಟರ್‌ ಪ್ರಕರಣದ ಸಿಬಿಐ ತನಿಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಸತೀಶ್‌ ಚಂದ್ರ ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಿರುವ ಕೇಂದ್ರ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಒಂದು ವಾರದ ತಡೆಯಾಜ್ಞೆ ನೀಡಿದೆ.

ಆಗಸ್ಟ್‌ 30ರಂದು ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಸೆಪ್ಟೆಂಬರ್‌ 30ರಂದು ಅವರು ನಿವೃತ್ತಿ ಹೊಂದಲಿದ್ದಾರೆ.

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠವು, ವರ್ಮಾ ಅವರಿಗೆ ವಜಾ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ.

ADVERTISEMENT

ತಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಸಚಿವಾಲಯಕ್ಕೆ ದೆಹಲಿ ಹೈಕೋರ್ಟ್‌ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ವರ್ಮಾ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.