ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಎರಡು ತಿಂಗಳ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್. ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಶಾ ಅವರೊನ್ನೊಳಗೊಂಡ ನ್ಯಾಯಪೀಠವು ಜಾಮೀನಿಗೆ ತಡೆ ನೀಡಿದೆ.
ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಪ್ರಜಾಪತಿ ಹಾಗೂ ಇತರರ ವಿರುದ್ಧ 2017ರಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.