ADVERTISEMENT

ಸರಣಿ ಬಾಂಬ್‌ ಸ್ಫೋಟ ಪ್ರಕರಣ: ಮದನಿ ವಿಚಾರಣೆಗೆ ತಡೆ ನೀಡಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 20:26 IST
Last Updated 7 ಆಗಸ್ಟ್ 2022, 20:26 IST
   

ನವದೆಹಲಿ: ಬೆಂಗಳೂರಿನಲ್ಲಿ 2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್‌ ನಜೀರ್‌ ಮದನಿ ಹಾಗೂ ಇತರ 20 ಆರೋಪಿಗಳ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದಹೇಮಂತ್‌ ಗುಪ್ತಾ ಮತ್ತು ವಿಕ್ರಂ ನಾಥ್‌ ಅವರಿದ್ದ ಪೀಠವು ಮುಂದಿನ ಆದೇಶದವರೆಗೂ ವಿಚಾರಣೆಯನ್ನು ರದ್ದುಮಾಡಿದೆ.

ತನಿಖೆ ವೇಳೆ ವಶಕ್ಕೆ ಪಡೆಯಲಾಗಿದ್ದ ಎಲೆಕ್ಟ್ರಾನಿಕ್‌ ಸಾಕ್ಷ್ಯಗಳನ್ನು ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಲೆಕ್ಟ್ರಾನಿಕ್‌ ಸಾಕ್ಷ್ಯಗಳ ಸತ್ಯಾಸತ್ಯತೆ ಸಾಬೀತು ಮಾಡಲು ಸಾಕ್ಷಿಗಳನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡುವಂತೆ ಕೋರಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇರಳ ಡೆಮಾಕ್ರಟಿಕ್‌ ಪಕ್ಷದ ನಾಯಕ ಮದನಿ ಹಾಗೂ ಇತರ ಆರೋಪಿಗಳಿಗೆ ಪೀಠವು ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.