ನವದೆಹಲಿ: ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ನೂತನ ಪಟ್ಟಿಯನ್ನು ಅಂತಿಮಗೊಳಿಸುವ ಪಶ್ಚಿಮ ಬಂಗಾಳ ಸರ್ಕಾರದ ಕ್ರಮಕ್ಕೆ ತಡೆ ನೀಡಿದ್ದ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್, ಎನ್.ವಿ.ಅಂಜಾರಿಯಾ ಅವರ ನೇತೃತ್ವದ ನ್ಯಾಯಪೀಠವು, ಹೈಕೋರ್ಟ್ ತೀರ್ಪಿನಲ್ಲಿ ದೋಷಗಳಿವೆ ಎಂದು ತಿಳಿಸಿ ಅದನ್ನು ವಜಾಗೊಳಿಸಿತು.
ಮೀಸಲಾತಿಯು ಕಾರ್ಯಾಂಗದ ವ್ಯಾಪ್ತಿಗೆ ಒಳಪಡುವ ವಿಚಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಆಯೋಗದ ಕಾರ್ಯವಿಧಾನವು ಸರಿಯಾಗಿದೆಯೇ ಅಥವಾ ತಪ್ಪಾಗಿದೆಯೇ ಎಂದು ಹೈಕೋರ್ಟ್ ನಿರ್ಧರಿಸಬೇಕು. ಹಿಂದಿನ ತೀರ್ಪನ್ನು ವಜಾಗೊಳಿಸಿದ್ದೇವೆ. ಈ ಬಗ್ಗೆ 6–8 ವಾರಗಳ ಒಳಗಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್‌ಗೆ ನಿರ್ದೇಶನ ನೀಡುತ್ತೇವೆ ಎಂದು ನ್ಯಾಯಪೀಠ ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.