ADVERTISEMENT

ವಕೀಲರಿಗೆ ಇ.ಡಿ ಸಮನ್ಸ್‌: ವಿಚಾರಣೆ ನಡೆಸಲಿದೆ ‘ಸುಪ್ರೀಂ’

ಪಿಟಿಐ
Published 9 ಜುಲೈ 2025, 16:26 IST
Last Updated 9 ಜುಲೈ 2025, 16:26 IST
ಭಾರತೀಯ ಸುಪ್ರೀಂಕೋರ್ಟ್ – ಪಿಟಿಐ ಚಿತ್ರ
ಭಾರತೀಯ ಸುಪ್ರೀಂಕೋರ್ಟ್ – ಪಿಟಿಐ ಚಿತ್ರ   

ನವದೆಹಲಿ: ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡುವ ಹಾಗೂ ಕಕ್ಷಿದಾರರನ್ನು ಪ್ರತಿನಿಧಿಸುವ ವಕೀಲರಿಗೆ ಸಮನ್ಸ್‌ ಜಾರಿ ಮಾಡಿ ವಿಚಾರಣೆ ನಡೆಸುವ ನಿರ್ದೇಶನಾಲಯದ (ಇ.ಡಿ) ಪ್ರವೃತ್ತಿಯ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣವನ್ನು ಸುಪ್ರೀಂ ಕೋರ್ಟ್ ದಾಖಲಿಸಿಕೊಂಡಿದ್ದು, ಜುಲೈ 14ರಂದು ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್‌.ವಿ. ಅಂಜಾರಿಯಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. ಹಿರಿಯ ವಕೀಲರಾದ ಅರವಿಂದ್ ದಾತಾರ್ ಮತ್ತು ಪ್ರತಾಪ್ ವೇಣುಗೋಪಾಲ್ ಅವರಿಗೆ ಇ.ಡಿ ಸಮನ್ಸ್‌ ನೀಡಿದ ಹಿನ್ನಲೆ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT